ಸುರತ್ಕಲ್ ನಲ್ಲಿ ಯುವಕನ ಹತ್ಯೆ
ಮಂಗಳೂರು : ಸುರತ್ಕಲ್ ನಲ್ಲಿರುವ ಬಾರೊಂದರ ಸಮೀಪ ಯುವಕನ ಕೊಲೆ ಘಟನೆ ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ನಡೆದಿದೆ.
ಗುಡ್ಡೆಕೊಪ್ಲ ನಿವಾಸಿ ಸಂದೇಶ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಸುರತ್ಕಲ್ ಜಂಕ್ಷನ್ ಬಳಿಯಿರುವ ಬಾರ್ ಮುಂಭಾಗ ಈ ಘಟನೆ ನಡೆದಿದೆ. ಗೆಳೆಯರ ನಡುವೆ ಉಂಟಾದ ಭಿನ್ನಾಭಿಪ್ರಾಯವೇ ಕೊಲೆಗೆ ಕಾರಣ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story