ಜ.2ರಂದು ಮಂಗಳೂರಿಗೆ ಕೇಂದ್ರ ಸಚಿವ ಕಿರಣ್ ರಿಜಿಜು
ಮಂಗಳೂರು, ಜ.1: ಕೇಂದ್ರ ಸರಕಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಚಿವ ಕಿರಣ್ ರಿಜಿಜು ಜ.2ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಸಂಜೆ 5:10ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಸಂಜೆ ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿರುವ 80ನೇ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ ಭಾಗವಹಿಸಲಿದ್ದಾರೆ. ನಂತರ ಮೂಡುಬಿದಿರೆ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜ.3ರಂದು ಬೆಳಗ್ಗೆ 4:50ಕ್ಕೆ ವಿಮಾನದ ಮೂಲಕ ಸಚಿವರು ದೆಹಲಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story