ಕೊಲ್ಲರಕೋಡಿ: ವಿವಾಹದ ಪ್ರಯುಕ್ತ ರಕ್ತದಾನ ಶಿಬಿರ
ರಕ್ತದಾನ ಮಾಡುತ್ತಿರುವ ಇಸ್ಮಾಯಿಲ್ ರವೂಫ್
ಕೊಲ್ಲರಕೋಡಿ, ಜ.5: ಕೊಲ್ಲರಕೋಡಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ಕಾಸ್ಕ್) ಮತ್ತು ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ ಹಾಗೂ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಕಾರದೊಂದಿಗೆ ಕಾಸ್ಕ್ ನರಿಂಗಾನ ಇದರ ಸದಸ್ಯ ಇಸ್ಮಾಯಿಲ್ ರವೂಫ್ ಅವರ ವಿವಾಹದ ಪ್ರಯುಕ್ತ ರಕ್ತದಾನ ಶಿಬಿರವು ಜ.5 ರಂದು ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1ರ ವರೆಗೆ ನಡೆಯಿತು.
ಈ ಸಂದರ್ಭ ಬ್ಲಡ್ ಡೋನರ್ಸ್ ಮಂಗಳೂರು ಪ್ರಧಾನ ಕಾರ್ಯದರ್ಶಿ ನವಾಝ್ ಎಂ.ಬಿ, ಕಾಸ್ಕ್ ನರಿಂಗಾನ ಅಧ್ಯಕ್ಷ ಸಲಾಂ ಎಂ.ಎಚ್, ಅಶ್ರಫ್ ಎಸ್.ಎಚ್, ಕಾಸ್ಕ್ ನರಿಂಗಾನ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.