ಯತ್ನಾಳ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ದೂರು
ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ
ಬೆಂಗಳೂರು, ಮಾ.4: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ವಿರುದ್ದ ಕಾಂಗ್ರೆಸ್ ಪಕ್ಷವು ರಾಜ್ಯಪಾಲರಿಗೆ ದೂರು ನೀಡಿತು.
ಇಂದು ಬೆಳಗ್ಗೆ ಪ್ರತಿಪಕ್ಷ ನಾಯಕ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರನ್ನು ಭೇಟಿಯಾಗಿ ಯತ್ನಾಳ್ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯಿಸಿತು.
ನಿಯೋಗದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿ.ಎಸ್.ಉಗ್ರಪ್ಪ, ಎಸ್.ಆರ್.ಪಾಟೀಲ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
Next Story