ಉಳ್ಳಾಲ ಎಎಸ್ಸೈಗೆ ಕೊರೋನ ಪಾಸಿಟಿವ್?
ಉಳ್ಳಾಲ, ಜೂ.26: ಉಳ್ಳಾಲ ಪೊಲೀಸ್ ಠಾಣೆಯ ಎಎಸ್ಸೈಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ. ಇವರು ತಲಪಾಡಿ ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.
ಎಎಸ್ಸೈಯ ಗಂಟಲದ್ರವದ ಪರೀಕ್ಷಾ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆದರೆ ಸದ್ಯ ಇದನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ದೃಢಪಡಿಸಿಲ್ಲ. ಎಎಸ್ಸೈ ಖಾಸಗಿ ಆಸ್ಪತ್ರೆಯಲ್ಲಿ ಕೊರೋನ ಪರೀಕ್ಷೆ ಮಾಡಿಸಿಕೊಂಡಿಕೊಂಡಿರುವ ಸಾಧ್ಯತೆಯಿದ್ದು, ಅದರ ವರದಿ ಇನ್ನೂ ನಮ್ಮ ಕೈಸೇರಿಲ್ಲ ಎಂದು ಡಿಎಚ್ಒ ಹೇಳಿದ್ದಾರೆ.
ಜೂ.24ರಂದು ಉಳ್ಳಾಲ ಠಾಣೆಯ ಪಿಎಸ್ಸೈ ಒಬ್ಬರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇವರು ಕೂಡಾ ಕೇರಳ ಗಡಿಭಾಗ ತಲಪಾಡಿಯ ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸಿದ್ದರು.
Next Story