ಕಿರಿಯ ಮಹಿಳಾ ಆರೋಗ್ಯ ಹುದ್ದೆ- ಅರ್ಜಿ ಆಹ್ವಾನ
ಉಡುಪಿ, ಸೆ.22: ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ಮಾಸಿಕ 15,000 ರೂ. ವೇತನದಂತೆ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕಿರಿಯ ಮಹಿಳಾ ಆರೋಗ್ಯ ಸಹಾಯ ಕಿಯರ ತರಬೇತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ, ಅಜ್ಜರಕಾಡು, ಉಡುಪಿ ಇಲ್ಲಿಂದ ಪಡೆಯ ಬಹುದು. ಅರ್ಜಿ ಸಲ್ಲಿಸಲು ಸೆ.23 ಕೊನೆಯ ದಿನವಾಗಿದೆ. ಸೆ.24ರಂದು 10:30ಕ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಯೊಂದಿಗೆ ಹಾಜರಾಗಬೇಕು.
ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2536650ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story