ಮಂಗಳೂರು ವಿವಿ : ಸೆ.28ಕ್ಕೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
ಮಂಗಳೂರು, ಸೆ.25: ಮಂಗಳೂರು ವಿಶ್ವವಿದ್ಯಾನಿಲಯವು ಸೆ.28ರಂದು ನಿಗದಿಪಡಿಸಲಾಗಿದ್ದ ಎಲ್ಲ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿದೆ.
ಅಂದಿನ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲಿ ತಿಳಿಸಲಾಗುವುದು. ಉಳಿದಂತೆ, ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.
Next Story