ಕೊಣಾಜೆ : ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
ಕೊಣಾಜೆ : ಮಂಜನಾಡಿ ಗ್ರಾಮದ ಕಲ್ಕಟ್ಟ ಬಳಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮಂಜನಾಡಿ ಗ್ರಾಮದ ಅಲ್ಫೋನ್ಸ್ (50) ಎಂಬವರೇ ಮೃತ ವ್ಯಕ್ತಿ.
ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಯೇ ಎಂದು ತಿಳಿದುಬಂದಿಲ್ಲ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Next Story