ದ.ಕ. ಜಿಲ್ಲೆ : ಕೋವಿಡ್ಗೆ 10 ಬಲಿ, 240 ಮಂದಿಗೆ ಕೊರೋನ ಸೋಂಕು
ಮಂಗಳೂರು, ಸೆ. 30: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ 10 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಬುಧವಾರ ಹೊಸದಾಗಿ 240 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ರಾಜ್ಯ ಬುಲೆಟಿನ್ ತಿಳಿಸಿದೆ.
ಬುಧವಾರ ಜಿಲ್ಲೆಯಲ್ಲಿ 299 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಇದರಿಂದ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Next Story