ಲೈಂಗಿಕ ಕಿರುಕುಳ ಆರೋಪ: ಬಾಲಕನ ಬಂಧನ
ಬಂಟ್ವಾಳ, ಸೆ. 30: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಾಲಕನೊಬ್ಬನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆ ಸಮೀಪದ ಕುಂಪನಮಜಲು ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾರಗಳ ಹಿಂದೆ ಪ್ರಕರಣ ದಾಖಲಾಗಿತ್ತು.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ಖಚಿತ ಸುಳಿವಿನ ಮೇರೆಗೆ ಅಪ್ರಾಪ್ತ ಬಾಲಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಿಸಿ ದಾಗ ಆತ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಆತನನ್ನು ಬಂಧಿಸಲಾಗಿದೆ ಎನ್ನಲಾಗಿದೆ.
Next Story