ಕಾಸರಗೋಡು, ಅ.2: ಗಾಂಧಿ ಜಯಂತಿ ಅಂಗವಾಗಿ ಇಂದು ಬೆಳಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಪುಷ್ಪಾರ್ಚನೆ ನಡೆಸಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ಪಿ.ಕುಂಞಿಕಣ್ಣನ್, ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಎನ್.ದೇವಿದಾಸ್ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.