ಡಿಪ್ಲೋಮ ಪ್ರವೇಶಕ್ಕೆ ಅವಧಿ ವಿಸ್ತರಣೆ
ಉಡುಪಿ, ಅ.20: ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮ ಪ್ರವೇಶಕ್ಕೆ ಎಸೆಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳ ಕೋರ್ಸ್ ಗಳಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.29ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪಾಲಿಟೆಕ್ನಿಕ್ ಉಡುಪಿ ದೂರವಾಣಿ ಸಂಖ್ಯೆ: 0820-2570244ನ್ನು ಸಂಪರ್ಕಿಸುವಂತೆ ಸಂ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
Next Story