ದ.ಕ.ಜಿಲ್ಲೆ : ಕೋವಿಡ್ಗೆ ಮೂವರು ಬಲಿ, ಹೊಸದಾಗಿ 154 ಮಂದಿಗೆ ಕೊರೋನ ಸೋಂಕು
ಮಂಗಳೂರು, ಅ.22: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಹೊಸದಾಗಿ 154 ಮಂದಿಗೆ ಸೋಂಕು ತಗುಲಿದ್ದು, 248 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 653ಕ್ಕೆ ಏರಿದೆ. ಜಿಲ್ಲೆಯಲ್ಲಿನ ಒಟ್ಟು 28,936 ಸೋಂಕಿತರ ಪೈಕಿ 25,535 ಮಂದಿ ಕೊರೋನ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 2,748 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
Next Story