ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಉಡುಪಿ, ಅ.23: ಪುತ್ತೂರು ಗ್ರಾಮದ ಆಶೀರ್ವಾದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.23ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ವೃದ್ಧರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಪುತ್ತೂರು ಗ್ರಾಮದ ಅಶೋಕ್ ನಗರದ ರಾಮಚಂದ್ರ ರಾವ್ (90) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುಲು ರಸ್ತೆಯ ಬದಿಯಲ್ಲಿ ನಿಂತಿರುವಾಗ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ರಮೇಶ್ ನಾಯ್ಕ ಎಂಬವ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಾಮಚಂದ್ರ ರಾವ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story