ಭಟ್ಕಳ: ದೇವಸ್ಥಾನದಲ್ಲಿ ಕಳವು ಪ್ರಕರಣ ; ಆರೋಪಿ ಸೆರೆ
ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಯಲ್ಲಾಪುರ ಇಡಗುಂದಿಯ ಸತೀಶ ರಾಮಚಂದ್ರ ಭಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದಾಗಿ ದೂರಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Next Story