ಉಡುಪಿ ಜಿಲ್ಲೆ : 79 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಅ. 24: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 79 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಅಲ್ಲದೇ ಇಂದು 173 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಶನಿವಾರ ಪಾಸಿಟಿವ್ ಬಂದ 79 ಮಂದಿಯಲ್ಲಿ ಮಕ್ಕಳು ಸೇರಿದಂತೆ 38 ಮಂದಿ ಪುರುಷರು ಹಾಗೂ 41 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 26 ಪುರುಷರು ಹಾಗೂ 39 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 34, ಕುಂದಾಪುರ ತಾಲೂಕಿನ 32 ಹಾಗೂ ಕಾರ್ಕಳ ತಾಲೂಕಿನ 13 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಾ.ಸೂಡ ಹೇಳಿದರು.
ದಿನದಲ್ಲಿ ಪಾಸಿಟಿವ್ ಬಂದ 79 ಮಂದಿಯಲ್ಲಿ 17 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿದರೆ, ಉಳಿದ 62 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ತಿಳಿಸಿದರು.
173 ಮಂದಿ ಗುಣಮುಖ: ಶನಿವಾರ ಒಟ್ಟು 173 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 19,927 ಆಗಿದೆ. ಜಿಲ್ಲೆಯಲ್ಲಿ ಸದ್ಯ 1314 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.
1877 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 1972 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1877 ಮಂದಿ ನೆಗೆಟಿವ್ ಬಂದಿದ್ದು, 92(ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,431 ಆಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,67,766 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,46,335 ಮಂದಿ ನೆಗೆಟಿವ್ ಹಾಗೂ 21,431 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 19,927 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದು, ಒಟ್ಟು 178 ಮಂದಿ ಮೃತಪಟ್ಟಿದ್ದಾರೆ.
ಶನಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾರೊಬ್ಬರೂ ಮೃತ ಪಟ್ಟಿಲ್ಲ. ಇದರಿಂದ ಈವರೆಗೆ ಕೋವಿಡ್ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 178 ಆಗಿದೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ನಲ್ಲಿ ತಿಳಿಸಲಾಗಿದೆ.