ಕೊಲ್ಲೂರು: ಅ.25ರ ಮುಂಜಾನೆ 4 ರಿಂದ ವಿದ್ಯಾರಂಭ
ಉಡುಪಿ, ಅ. 24: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿಯ ಸಂದರ್ಭದಲ್ಲಿ ನಡೆಯುವ ಮಕ್ಕಳ ವಿದ್ಯಾರಂಭ ಕಾರ್ಯಕ್ರಮ ಅ.25ರ ಪ್ರಾತ:ಕಾಲ 4 ಕ್ಕೆ ಪ್ರಾರಂಭಗೊಳ್ಳಲಿದೆ ಎಂದು ದೇವಸ್ಥಾನದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ವಿದ್ಯಾರಂಭಕ್ಕೆ ದಂಪತಿ ಸಮೇತ ಮಗುವಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story