ಅ.31 : ಕರಾವಳಿ ಕಾವಲು ಪೊಲೀಸ್ನಿಂದ ರಾಷ್ಟ್ರೀಯ ಏಕತೆಗಾಗಿ ಓಟ
ಉಡುಪಿ, ಅ.30: ಕರಾವಳಿ ಕಾವಲು ಪೊಲೀಸ್ ವತಿಯಿಂದ ಅ.31ರ ಬೆಳಗ್ಗೆ 6:30ಕ್ಕೆ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಕಟಪಾಡಿ ಮಟ್ಟು ಬೀಚ್ನಿಂದ ಪಡುಕೆರೆಯ ಪಂಡರಿನಾಥ ಭಜನಾ ಮಂದಿರದವರೆಗೆ ಏಕತೆಗಾಗಿ ಓಟ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಗಳು, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿರುವುದಾಗಿ ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಆರ್.ಚೇತನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story