ಪಡುಬಿದ್ರಿ: ಬ್ಲೂಫ್ಲ್ಯಾಗ್ ಬೀಚ್ಗೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಪಡುಬಿದ್ರಿ: ಇಲ್ಲಿನ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ಗೆ ನ.3 ರಿಂದ ಮುಂದಿನ 16 ದಿನಗಳವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬ್ಲೂಫ್ಲ್ಯಾಗ್ ಬೀಚ್ ಪ್ರಬಂಧಕ ವಿಜಯ ಶೆಟ್ಟಿ, ಬೀಚ್ನಲ್ಲಿ ಇನ್ನೂ ಕಲಸ ಕಾರ್ಯಗಳು ನಡೆಯುವ ಹಿನ್ನಲೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಸಲಾಗಿದೆ. ಬೀಚ್ ಒಳಭಾಗದಲ್ಲಿ ಬಿದಿರ ಹಟ್ಗಳ ನಿರ್ಮಾಣ ಕಾರ್ಯ ಆರಂಭಿಸಲಾಗಿದ್ದು, ಪ್ರವಾಸಿಗರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಬ್ಲೂಫ್ಲ್ಯಾಗ್ ಬೀಚ್ ಮಾನ್ಯತೆ ಬಳಿಕ ಕಳೆದ 25 ದಿನಗಳಿಂದ ಸಾವಿರಾರು ಪ್ರವಾಸಿಗರು ಬೀಚ್ಗೆ ಭೇಟಿ ನೀಡಿದ್ದರು.
Next Story