ಸುಳ್ಯ : ನ.ಪಂ. ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್, ಉಪಾಧ್ಯಕ್ಷರಾಗಿ ಸರೋಜಿನಿ ಪೆಲ್ತಡ್ಕ
ಸುಳ್ಯ : ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯು ಇಂದು ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ವಿನಯ್ ಕುಮಾರ್ ಕಂದಡ್ಕ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸರೋಜಿನಿ ಪೆಲತ್ತಡ್ಕ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ವಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಅನಂತ ಶಂಕರ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್ ಅಂಗಾರ, ಉಪತಹಶೀಲ್ದಾರ್ ಚಂದ್ರಕಾಂತ್ ಕಂದಾಯ ನಿರೀಕ್ಷಕರು ಕೊರಗಪ್ಪ ಹೆಗಡೆ ಹಾಗೂ ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Next Story