ದ.ಕ. ಜಿಲ್ಲೆ : 72 ಮಂದಿಗೆ ಕೊರೋನ ಸೋಂಕು, ಕೋವಿಡ್ಗೆ ಮತ್ತೋರ್ವ ಬಲಿ
ಮಂಗಳೂರು, ನ. 7: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶನಿವಾರ ಹೊಸದಾಗಿ 72 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ನಡುವೆ 169 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 30,819 ಸೋಂಕಿತರ ಪೈಕಿ 29,103 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಇಲ್ಲಿಯವರೆಗೆ 687 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 1,029 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 11,406 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 12,46,892 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story