ದ.ಕ. ಜಿಲ್ಲೆ : 63 ಮಂದಿಗೆ ಕೊರೋನ ಸೋಂಕು, ಕೋವಿಡ್ಗೆ ಮತ್ತೋರ್ವ ಬಲಿ
ಮಂಗಳೂರು, ನ.11: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೋರ್ವ ಮೃತಪಟ್ಟಿದ್ದಾರೆ. ಈ ನಡುವೆ ಬುಧವಾರ 63 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಅಲ್ಲದೆ, 125 ಮಂದಿ ಕೊರೋನ ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು 31,065 ಸೋಂಕಿತರ ಪೈಕಿ 29,550 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 690ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 825 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 12,067 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 13,13,142 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
Next Story