ದ.ಕ.ಜಿಲ್ಲೆಯಲ್ಲಿ ಸೋಮವಾರ 50 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ನ.16: ದ.ಕ.ಜಿಲ್ಲೆಯಲ್ಲಿ ಸೋಮವಾರ 50 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಈವರೆಗೆ 3,01,550 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಆ ಪೈಕಿ 2,70,241 ಮಂದಿಯ ವರದಿ ನೆಗೆಟಿವ್ ಮತ್ತು 31,409 ಮಂದಿಯ ವರದಿ ಪಾಸಿಟಿವ್ ಬಂದಿದೆ. ಅಲ್ಲದೆ ಸೋಮವಾರ 71 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ ಈವರೆಗೆ ಗುಣಮುಖರಾದವರ ಸಂಖ್ಯೆ 29,871ಕ್ಕೇರಿದೆ. ಮೃತಪಟ್ಟವರ ಸಂಖ್ಯೆ 694ಕ್ಕೇರಿದೆ. ಸೋಮವಾರದವರೆಗೆ ಜಿಲ್ಲೆಯಲ್ಲಿ 744 ಸಕ್ರಿಯ ಪ್ರಕರಣಗಳಿವೆ.
ಮಾಸ್ಕ್ ಧರಿಸದೆ ಕೋವಿಡ್ -19 ನಿಯಮ ಉಲ್ಲಂಘಿಸಿದ ಘಟನೆಗೆ ಸಂಬಂಧಿಸಿ ಈವರೆಗೆ 13,135 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ 14,21,717 ರೂ.ವನ್ನು ಸಂಗ್ರಹಿಸಲಾಗಿದೆ.
Next Story