ದ.ಕ. ಜಿಲ್ಲೆಯಲ್ಲಿ ಶುಕ್ರವಾರ 36 ಮಂದಿಗೆ ಕೊರೋನ ಸೋಂಕು ದೃಢ
ಮಂಗಳೂರು, ನ.20: ಜಿಲ್ಲೆಯಲ್ಲಿ ಶುಕ್ರವಾರ 36 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಸೋಂಕಿಗೆ ಓರ್ವ ಬಲಿಯಾಗಿದ್ದಾರೆ. 69 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 31,474 ಸೋಂಕಿತರ ಪೈಕಿ 30,142 ಮಂದಿ ಕೊರೋನಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್ಗೆ 701 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 631 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 13,602 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 14,70,072 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story