ಎಂಡೋಸಲ್ಫಾನ್ ಅಂಗವಿಕಲರಿಗೆ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಅನುದಾನ ಬಿಡುಗಡೆಗೊಳಿಸಲು ಆಗ್ರಹ
ಬೈಂದೂರು, ನ.22: ನಾಡಾ ಗ್ರಾಪಂ ವ್ಯಾಪ್ತಿಯ ಸೇನಾಪುರದಲ್ಲಿ ಮೀಸಲಿರಿಸಿರುವ ಐದು ಎಕ್ರೆ ಸರಕಾರಿ ಜಾಗದಲ್ಲಿ ಎಂಡೋಸಲ್ಫಾನ್ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಸರಕಾರಕ್ಕೆ ಸಲ್ಲಿಸಿರುವ ಪ್ರಸ್ತಾವಕ್ಕೆ ಕೂಡಲೇ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನಿಯೋಗವು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ವೆಂಕಟೇಶ್ ಕೋಣಿ, ಜಿಲ್ಲಾ ಮುಖಂಡರಾದ ಬಾಬು ಕೆ.ದೇವಾಡಿಗ ಉಪ್ಪುಂದ, ವಿಜಯ ನಾಗೂರು ಕಿರಮಂಜೆಶ್ವರ, ಕಿಶನ್ ಪ್ರಭು ಉಪ್ಪುಂದ ಮೊದಲಾದವರು ಉಪಸ್ಥಿತರಿದ್ದರು.
Next Story