ದ.ಕ. ಜಿಲ್ಲೆ : ಕೋವಿಡ್ಗೆ ನಾಲ್ಕು ಬಲಿ
ಮಂಗಳೂರು, ನ.23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಹೊಸದಾಗಿ 28 ಮಂದಿಗೆ ಕೊರೋನ ಸೋಂಕು ತಗುಲಿದ್ದು, 53 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 31,594 ಸೋಂಕಿತರ ಪೈಕಿ 30,336 ಮಂದಿ ಕೊರೋನಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್ಗೆ 708 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 550 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 13,984 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 15,11,242 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story