ದ.ಕ. ಜಿಲ್ಲೆ : 31 ಮಂದಿಗೆ ಕೋವಿಡ್ ಸೋಂಕು
ಮಂಗಳೂರು, ನ. 24: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 31 ಮಂದಿಗೆ ಕೊರೋನ ಸೋಂಕು ತಗುಲಿದ್ದು, 52 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ.
ಜಿಲ್ಲೆಯಲ್ಲಿನ 31,625 ಸೋಂಕಿತರ ಪೈಕಿ 30,338 ಮಂದಿ ಕೊರೋನಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್ಗೆ 708 ಮಂದಿ ಮೃತಪಟ್ಟಿ ದ್ದಾರೆ. ಜಿಲ್ಲೆಯಲ್ಲಿ 529 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 14,132 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 15,26,2422 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story