ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಉಡುಪಿ, ನ. 26: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಬೀದಿಬದಿ ವ್ಯಾಪಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸಮೃದ್ಧಿ ಯೋಜನೆಯಡಿ 10000 ರೂ. ಪ್ರೋತ್ಸಾಹದನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574978 ಸಂಪರ್ಕಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story