ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ
ಉಡುಪಿ : ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರವಿವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜೊತೆಗಿದ್ದರು.
ಶನಿವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಪ್ರವಾಸದಿಂದ ಕುಂದಾಪುರಕ್ಕೆ ಆಗಮಿಸಿದ್ದ ಡಿಕೆಶಿ, ರಾತ್ರಿ ಕಮಲಶಿಲೆಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದರು.