ಡಿ.1ರಂದು ವಿಶ್ವ ಏಡ್ಸ್ ದಿನಾಚರಣೆ: ಜಾಗೃತಿ ಕಾರ್ಯಕ್ರಮ
ಉಡುಪಿ, ನ.30: ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರ ಸಂಘಸಂಸ್ಥೆ ಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ -2020, ಜಾಥ ಮತ್ತು ಜಾಗೃತಿ ಕಾರ್ಯಕ್ರಮವನ್ನು ಡಿ.1ರಂದು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9.30ಕ್ಕೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದಿಂದ ಹೊರಡುವ ಜಾಥಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಚಾಲನೆ ನೀಡಲಿರುವರು. ಬೆಳಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮ ವನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಉದ್ಘಾಟಿಸಲಿರುವರು.
ಅಧ್ಯಕ್ಷತೆಯನ್ನು ಜಿಪಂ ಸಿಇಓ ಡಾ.ನವೀನ್ ಭಟ್ ವಹಿಸಲಿರುವರು. ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಸನ್ಮಾನಿಸಲಾಗುವುದು ಎಂದು ಡಿಎಚ್ಓ ಡಾ.ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
Next Story