ಪುಂಜಾಲಕಟ್ಟೆ: ನಿಯಂತ್ರಣ ತಪ್ಪಿದ ಬೈಕ್ ಪಲ್ಟಿ; ಮಹಿಳೆ ಮೃತ್ಯು
ಬಂಟ್ವಾಳ : ರಸ್ತೆ ಅಪಘಾತ ಬೈಕ್ ಮಗುಚಿ ಬಿದ್ದು, ಕಡಬದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಕಡಬ ಸಮೀಪದ ಓಣಿಬಾಗಿಲು ನಿವಾಸಿ ಜೋಸ್ ಅವರ ಪತ್ನಿ ಕ್ಲಾರಮ್ಮ (60) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಸಂಚರಿಸುತ್ತಿರುವಾಗ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾದ ಪರಿಣಾಮ ಮಹಿಳೆಗೆ ಬಲವಾಗಿ ಏಟು ಬಿದ್ದ ಕಾರಣ ಗಂಭೀರ ಗಾಯಗೊಂಡ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story