ದ.ಕ. ಜಿಲ್ಲೆ : 35 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು, ಡಿ.2: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 35 ಮಂದಿಗೆ ಕೊರೋನ ಸೋಂಕು ತಗುಲಿದ್ದು, 41 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 31,994 ಸೋಂಕಿತರ ಪೈಕಿ 30,705 ಮಂದಿ ಕೊರೋನಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್ಗೆ 713 ಮಂದಿ ಮೃತ ಪಟ್ಟಿದ್ದಾರೆ. ಜಿಲ್ಲೆಯಲ್ಲಿ 576 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜಿಲ್ಲೆಯಲ್ಲಿ 15,071 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 16,18,022 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story