ಕಾಸರಗೋಡು : ಗ್ರನೇಡ್ ಸ್ಪೋಟ; ಇಬ್ಬರು ಪೊಲೀಸರಿಗೆ ಗಾಯ
ಕಾಸರಗೋಡು : ಗ್ರನೇಡ್ ( ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನಡೆದಿದೆ.
ಗಾಯಗೊಂಡ ಸುಧಾಕರ ಹಾಗೂ ಪವಿತ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನಲೆಯಲ್ಲಿ ತರಬೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರನೇಡ್ ಸ್ಪೋಟಗೊಂಡು ಈ ಅವಘಡ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪೈಕಿ ಸುಧಾಕರ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕೋಝಿಕ್ಕೋಡ್ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story