ಕಾರು ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ
ಮುಂಡಗೋಡ,ಡಿ.13: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಸಂಭವಿಸಿದೆ.
ಮೈನಳ್ಳಿ ಗ್ರಾಮದ ಸಣ್ಣ್ಯಾ ಪುಟ್ಟಾ ಸಿದ್ದಿ(38) ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಲ್ಲಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಹಾಗೂ ಮುಂಡಗೋಡದಿಂದ ಮೈನಳ್ಳಿ ಗ್ರಾಮಕ್ಕೆ ಬೈಕ್ ಸವಾರ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Next Story