ಕೆ.ಎಂ.ಶರೀಫ್ ನಿಧನ: ಮಿತ್ತಬೈಲ್ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ
ಬಂಟ್ವಾಳ, ಡಿ.22: ಇಂದು ಮಧ್ಯಾಹ್ನ ನಿಧನರಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಬಿ.ಸಿ.ರೋಡ್ ಕೈಕಂಬದ ಮಿತ್ತಬೈಲ್ ಮಸೀದಿಯಲ್ಲಿ ಸಂಜೆ ಅವಕಾಶ ಕಲ್ಪಿಸಲಾಗಿದೆ ಎಂದು ಪಿ.ಎಫ್.ಐ. ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಫರಂಗಿಪೇಟೆ ತಿಳಿಸಿದ್ದಾರೆ.
ಸಂಜೆ 5 ಗಂಟೆಯ ಸುಮಾರಿಗೆ ಪಾರ್ಥಿವ ಶರೀರವನ್ನು ಮಿತ್ತಬೈಲ್ ಮಸೀದಿಗೆ ತರಲಾಗುವುದು. ಇಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಮಿತ್ತಬೈಲ್ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story