ಜ.25: ಮತದಾರರ ದಿನಾಚರಣೆ
ಜ.18:ಉಡುಪಿ ಜಿಲ್ಲಾ ಚುನಾವಣಾಧಿಕಾರಿಗಳ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ.25ರಂದು ಬೆಳಗ್ಗೆ 10 ಗಂಟೆಗೆ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರವನ್ನು ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್. ವಹಿಸುವರು. ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪಕೆ., ಉಡುಪಿ ತಾಲೂಕು ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.
Next Story