ಉಡುಪಿ: ಮೈ ಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಉಡುಪಿ : ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ವ್ಯಕ್ತಿಯೊಬ್ಬರು ಮೈ ಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ರಾತ್ರಿ 9 ಗಂಟೆಗೆ ವೇಳೆಗೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು 30 ಹರೆಯದ 80 ಬಡಗಬೆಟ್ಟು ನಿವಾಸಿ ಶ್ರೀವಾತ್ಸವ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಾಹಿತಿ ತಿಳಿದ ಅಗ್ನಿಶಾಮಕದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿ ಗಂಭೀರ ವಾಗಿರುವ ಕಾರಣಕ್ಕೆ ಮಣಿಪಾಲ ಖಾಸಗಿ ರವಾನಿಸಲಾಗಿದೆ.
Next Story