ದ.ಕ.: 10 ಮಂದಿಗೆ ಕೊರೋನ ಸೋಂಕು
ಸಾಂದರ್ಭಿಕ ಚಿತ್ರ
ಮಂಗಳೂರು, ಜ.11: ದ.ಕ. ಜಿಲ್ಲೆಯಲ್ಲಿ ಸೋಮವಾರ 10 ಮಂದಿಗೆ ಕೊರೋನ ಸೋಂಕು ತಗುಲಿದ್ದು, 29 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,265 ಸೋಂಕಿತರ ಪೈಕಿ 32,087 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ 446 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 22,404 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ವರದಿಯಾಗಿದ್ದು, 23,73,370 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story