ದ.ಕ. ಜಿಲ್ಲೆ : 20 ಮಂದಿಗೆ ಕೋವಿಡ್ ಪಾಸಿಟಿವ್
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬುಧವಾರ 20 ಮಂದಿಗೆ ಕೊರೋನ ಸೋಂಕು ದೃಢವಾಗಿದ್ದು, 45 ಮಂದಿ ಗುಣ ಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,309 ಸೋಂಕಿತರ ಪೈಕಿ 32165 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ 412 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 23233 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 2458240 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story