ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಸೆರೆ
ಮಂಗಳೂರು, ಜ.14: ನಗರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಓರ್ವನನ್ನು ಮಂಗಳೂರು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ಮುಹಮ್ಮದ್ ರಫೀಕ್ ಬಂಧಿತ ಆರೋಪಿ.
ಬುಧವಾರ ಮಧ್ಯಾಹ್ನ 2:50ರ ಸುಮಾರಿಗೆ ನಗರದ ನೆಹರೂ ಮೈದಾನದ ಪುಟ್ಬಾಲ್ ಮೈದಾನದ ಬಳಿ ಸಿಟಿ ಕ್ರೈಂ ಬ್ರಾಂಚ್ನ ಪಿಎಸ್ಐ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಹೊಂಡಾ ಡಿಯೋ ದ್ವಿಚಕ್ರ ವಾಹನದಲ್ಲಿ ಆರೋಪಿ ಮುಹಮ್ಮದ್ ರಫೀಕ್ ಎಂಬಾತನು ಕೈಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ. ಈತನನ್ನು ವಶಕ್ಕೆ ಪಡೆದ ಪೊಲೀಸರು, 27 ಸಾವಿರ ರೂ. ವೌಲ್ಯದ 1 ಕೆ.ಜಿ. 350 ಗ್ರಾಂ ತೂಕದ ಗಾಂಜಾ, 40 ಸಾವಿರ ವೌಲ್ಯದ ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಕುರಿತು ಎಕನಾಮಿಕ್ಸ್ ಆ್ಯಂಡ್ ನಾರ್ಕೊಟಿಕ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story