ಜ.17ರಂದು ‘ಜಾನಪದ ವೈಭವ -2021’ ಕಾರ್ಯಕ್ರಮ
ಉಡುಪಿ, ಜ.15: ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಉಡುಪಿ ರಂಗಭೂಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮತ್ತು ಲಯನ್ಸ್ ಸಂಸ್ಥೆ ಜಿಲ್ಲೆ 317ಸಿ ಸಹಯೋಗದಲ್ಲಿ ಜಾನಪದ ವೈಭವ -2021 ಕಾರ್ಯಕ್ರಮವು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪ ದಲ್ಲಿ ಜ.17ರಂದು ಸಂಜೆ 4ಗಂಟೆಗೆ ಜರಗಲಿದೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಪರಿಷತ್ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯಕ್ರಮವನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಗೌಡ ವಹಿಸಲಿರುವರು. ಕಲಾ ಸಂಚಯ ಕೃತಿಯನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಡುಗಡೆಗೊಳಿಸಲಿರುವರು ಎಂದರು.
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಣ ತಜ್ಞ ಮತ್ತು ಕಲಾ ಸಂಘಟಕ ಮುರಲಿ ಕಡೆಕಾರ್ ಅವರನ್ನು ಸನ್ಮಾನಿಸಲಾಗುವುದು. ಬಳಿಕ ನಾಡಿನ ವಿವಿಧ ಜಾನಪದ ಕಲೆಗಳ ಪ್ರದರ್ಶನ ಡೆಯಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರವಿರಾಜ ನಾಯಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಾಧನಾ ಕಿಣಿ, ರಂಗಭೂಮಿಯ ಪ್ರದೀಪ್ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.