ಜ.17ರಂದು ಕೋಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
ಉಡುಪಿ, ಜ15: ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಜ.17ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಫ್ಡಿಎ ಹುದ್ದೆಗಳಿಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಅಣಕು ಪರೀಕ್ಷೆಗಳು ನಡೆಯಲಿವೆ.
ಉಚಿತವಾಗಿ ನಡೆಯುವ ಈ ತರಬೇತಿ ಶಿಬಿರದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿ-ಶೈನ್ ಕೋಚಿಂಗ್ ಸೆಂಟರ್ ಪ್ರಕಟಣೆ ಯಲ್ಲಿ ತಿಳಿಸಿದೆ. ಹೆಸರು ನೊಂದಾಯಿಸಿಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಹರೀಶ್ ಕುಮಾರ್ ಶೆಟ್ಟಿ: 9980040551, ವಿವೇಕ್ ಅಮೀನ್: 9008649069 ಹಾಗೂ ಗಿರೀಶ್ ಶೆಟ್ಟಿ: 7619310724 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story