ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಅಂಗಾರ ಭೇಟಿ
ಬೆಳ್ತಂಗಡಿ, ಜ.16: ರಾಜ್ಯ ಸರಕಾರದ ನೂತನ ಸಚಿವ ಅಂಗಾರ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ ಮಾಡಿದ ಸಚಿವರು ಅವರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
Next Story