ಉಡುಪಿ ಜಿಲ್ಲೆಯ ಐವರಲ್ಲಿ ಕೋವಿಡ್ ಸೋಂಕು
ಉಡುಪಿ, ಜ.16: ಶನಿವಾರ ಉಡುಪಿ ಜಿಲ್ಲೆಯ ಐವರಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ದಿನದಲ್ಲಿ 19 ಮಂದಿ ಸೋಂಕಿ ನಿಂದ ಗುಣಮುಖ ರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ ಈಗ 27ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ ಐವರಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು. ಇವರಲ್ಲಿ ನಾಲ್ವರು ಉಡುಪಿ ತಾಲೂಕಿನವರಾದರೆ, ಒಬ್ಬರು ಕುಂದಾಪುರ ತಾಲೂಕಿನವರು. ಮೂವರು ಹೋಮ್ ಐಸೋಲೇಷನ್ನಲ್ಲಿದ್ದಾರೆ ಎಂದವರು ವಿವರಿಸಿದರು.
19 ಮಂದಿ ಬಿಡುಗಡೆ: ಶುಕರವಾರ ಜಿಲ್ಲೆಯ ಒಟ್ಟು 19 ಮಂದಿ ಚಿಕಿತ್ಸೆ ಬಳಿಕ ಕೊರೋನಾದಿಂದ ಮುಕ್ತಿ ಪಡೆದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತಿ ಪಡೆದವರ ಒಟ್ಟು ಸಂಖ್ಯೆ ಈಗ 23,002ಕ್ಕೇರಿದೆ ಎಂದರು.
1130 ಮಂದಿ ನೆಗೆಟಿವ್: ಶುಕ್ರವಾರ ಜಿಲ್ಲೆಯ ಒಟ್ಟು 1136 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1130 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಆರು ಮಂದಿಯಲ್ಲಿ ಮಾತ್ರ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಇದುವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,218 ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,20,891 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 2,97,673 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,218 ಮಂದಿ ಪಾಸಿಟಿವ್ ಬಂದಿದ್ದರೆ, 23,002 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್ಗೆ ಯಾರೂ ಬಲಿಯಾಗಿಲ್ಲ. ಈವರೆಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 189ರಲ್ಲೇ ಇದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.