ದ.ಕ. ಜಿಲ್ಲೆ : 20 ಮಂದಿಗೆ ಕೋವಿಡ್ ಪಾಸಿಟಿವ್ ; ಓರ್ವ ಮೃತ್ಯು
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 20 ಮಂದಿಗೆ ಕೊರೋನ ಸೋಂಕು ತಗುಲಿದ್ದು, ಓರ್ವ ಮೃತಪಟ್ಟಿದ್ದಾರೆ. ಈ ನಡುವೆ 41 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33394 ಸೋಂಕಿತರ ಪೈಕಿ 32556 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 733 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ 395 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 24329 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 2565845 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story