ದ.ಕ. ಜಿಲ್ಲೆ: 31 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜ.17: ದ.ಕ.ಜಿಲ್ಲೆಯಲ್ಲಿ ರವಿವಾರ 31 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 33,425 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ರವಿವಾರ 46 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ 32,612 ಮಂದಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗಿದೆ. ಜಿಲ್ಲೆಯಲ್ಲಿ 5,45,377 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 5,11,952 ಮಂದಿಯ ವರದಿ ನೆಗೆಟಿವ್ ಮತ್ತು 33,425 ಮಂದಿಯ ವರದಿ ಪಾಸಿಟಿವ್ ಆಗಿದೆ. ಅಲ್ಲದೆ 80 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 733 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 24,744 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 26,07,345 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
Next Story