ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ಗಾಗಿ ಅರ್ಜಿ ಆಹ್ವಾನ
ಉಡುಪಿ, ಜ.19: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕತಿ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನಗಳನ್ನು ಒಳಗೊಂಡ ತಲಾ 25,000ರೂ.ಗಳ ಬ್ರೈಲ್ ಕಿಟ್ಗನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ
ಅಂಧ ವಿದ್ಯಾರ್ಥಿಗಳ ವಿಕಲತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಾಗಿರುವ, ಎಸೆಸೆಲ್ಸಿ ಹಾಗೂ ನಂತರದ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿ ರುವ, ರಾಜ್ಯದಲ್ಲಿ ಕನಿಷ್ಠ 10ವರ್ಷಗಳ ನಿವಾಸಿಯಾಗಿರುವವರು, ಸಂಬಂಧಪಟ್ಟ ಶಾಲಾ ಕಾಲೇಜುಗಳ ಮುಖ್ಯಸ್ಥರಿಂದ ಶಿಕ್ಷಣ ಪಡೆಯುತ್ತಿರು ಬಗ್ಗೆ ದೃಢೀಕರಣ ಒದಗಿಸಬೇಕು.
ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತಿತಿರ, ಜಿಲ್ಲಾ ಪಂಚಾಯತ್ ವಿಬಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿ ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.