ಕುಂದಾಪುರ: ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಆರೋಪಿ ಸೆರೆ
ಕುಂದಾಪುರ, ಜ.19: ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
ಹನುಮಂತ ಬಂಧಿತ ಆರೋಪಿ.
ತೋಟದ ಕೆಲಸ ಮಾಡುತ್ತಿದ್ದ ಹನುಮಂತ ಜ.17ರಂದು ಸಂಜೆ ವೇಳೆ ಬಾಲಕಿಯ ಮನೆಗೆ ಪ್ರವೇಶಿಸಿ ಅತ್ಯಾಚಾರ ಮಾಡಿ, ಲೈಂಗಿಕ ದೌಜರ್ನ್ಯ ಎಸಗಿರುವುದಾಗಿ ದೂರಲಾಗಿದೆ.
ಜ.18ರಂದು ಪ್ರಕರಣ ದಾಖಲಾಗಿದ್ದು, ಅದೇ ದಿನ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಉಡುಪಿಯ ಪೋಕ್ಸೋ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story