ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಕಾರ್ಕಳ, ಜ.19: ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಜ.17ರಂದು ರಾತ್ರಿ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಹರಿಕೃಷ್ಣ ನೆಲ್ಲಿ ಎಂಬವರ ಮನೆಯ ಮುಂದಿನ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ರೂಮಿನ ಗೋದ್ರೇಜ್ ಕಪಾಟು ಮತ್ತು ವಾಲ್ಡೋಸ್ ಕಪಾಟಿನಲ್ಲಿರಿಸಿದ್ದ ಹರಿಕೃಷ್ಣರ ಪತ್ನಿ ಹಾಗೂ ಮಗಳ 82 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿ ದ್ದಾರೆ. ಇವುಗಳ ಒಟ್ಟು ಮೌಲ್ಯ 3,28,000ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story