ದ.ಕ.ಜಿಲ್ಲೆ: 25 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜ.19: ದ.ಕ.ಜಿಲ್ಲೆಯಲ್ಲಿ ಮಂಗಳವಾರ 25 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 33,463 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಮಂಗಳವಾರ 40 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ ಈವರೆಗೆ 32,458 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,98,732 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 4,65,269 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 268 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 737 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 25,507 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 26,82,190 ರೂ. ದಂಡವನ್ನು ವಸೂಲಿ ಮಾಡಲಾಗಿದೆ.
Next Story